
ನವದೆಹಲಿ: ಇನ್ನೇನು ಎರಡು ವಾರದ ಬಳಿಕ ಸ್ವಾತಂತ್ರ್ಯ ದಿನಾಚರಣೆ ಇದ್ದು ಹೀಗಾಗಿ ಈ ಬಾರಿಯ ಸ್ವಾತಂತ್ರ್ಯ ದಿನದಂದು ಯಾವ ವಿಷಯದ ಬಗ್ಗೆ ತಾವು ಮಾತನಾಡಬಹುದು ಎಂಬ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮೋದಿ, ‘ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ನೀವು ಯಾವ ವಿಷಯ ಅಥವಾ ವಿಚಾರಗಳ ಮೇಲೆ ಬೆಳಕು ಚೆಲ್ಲಬೇಕು ಎಂದು ಬಯಸುತ್ತೀರಿ?’ ಎಂದು ಕೇಳಿದ್ದು ಜನರು ಮೈಗೌ ಅಥವಾ ನಮೋ ಆ್ಯಪ್‌ಗಳ ಮೂಲಕ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುದಾಗಿದೆ.