
ರಾಜ್ಯದ ಹಲವೆಡೆ ಭಾರಿ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ,ಉಡುಪಿ ,ಶಿವಮೊಗ್ಗ ,ಕೊಡಗು ,ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಾದರೆ, ಕೊಡಗು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆ ಆಗುವ ಸಾಧ್ಯತೆ ಇದೆ.
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಮಂಗಳೂರು 27 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













