
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು ಉಡುಪಿ ಜಿಲ್ಲೆಯಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್,ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್













