
ರಾಜ್ಯದ ಹಲವೆಡೆ ಇಂದು ಕೂಡ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಚಾಮರಾಜ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದ್ದು ಕರಾವಳಿ ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು, ಮೈಸೂರು ಮಂಡ್ಯ ಹಾಸನ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್













