
ಕರಾವಳಿಯಲ್ಲಿ ಮುಂದಿನ ಐದು ದಿನಗಳ ಕಾಲ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಆಗಸ್ಟ್ 29ರಿಂದ 31ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಆಗಸ್ಟ್ 29ರಿಂದ 30ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.













