
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಬೆಳಗಾವಿ ಕಲಬುರಗಿ ಬೀದರ್ ಜಿಲ್ಲೆಗಳಲ್ಲೂ ಮಳೆ ಮುಂದುವರೆಯಲಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.













