
ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವೆಡೆ, ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಇನ್ನುಳಿದ ಸ್ಥಳಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.













