
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಒಣಹವೆಯ ವಾತಾವರಣ ಮುಂದುವರಿಯಲಿದೆ. ಇದರೊಂದಿಗೆ ಕೆಲ ಜಿಲ್ಲೆಗಳಲ್ಲಿ ವರುಣನ ಆಗಮನವೂ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಿಗೆ ಸದ್ಯ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ದಕ್ಷಿಣದ ಜಿಲ್ಲೆಗಳ ಕೆಲ ಪ್ರದೇಶಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಮೂರು ದಿನ ಬೆಂಗಳೂರಿಗೆ ಸಾಧಾರಣ ಮಳೆ ಸಾಧ್ಯತೆ ಇದೆ.
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್