
ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗುವ ಹಿನ್ನೆಲೆ ರಾಜ್ಯದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೊಡಗು ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.





















































