
ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಹಾಸನ, ಕೊಡಗು, ರಾಮನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳು, ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ.
















































