
ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ,ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್






