
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದ್ದು ಡಿಸೆಂಬರ್ 19 ಮತ್ತು 20 ರಂದು ಕರಾವಳಿ ಉತ್ತರ ಒಳನಾಡು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ. ಬೆಂಗಳೂರು ನಗರ ಚಾಮರಾಜನಗರ ರಾಮನಗರ ಕೋಲಾರ ಮೈಸೂರು ಮಂಡ್ಯ ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್