
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ನಾಲ್ಕು ದಿನಗಳ ಕಾಲ ಶೀತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಉತ್ತರ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು ,ಹಾಸನ, ಮಂಡ್ಯ, ದಾವಣಗೆರೆ, ಬೆಂಗಳೂರು ನಗರ ,ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ರಾಯಚೂರು ಜಿಲ್ಲೆಗಳ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ೨೨ ಡಿಗ್ರಿ ಸೆಲ್ಸಿಯಸ್



















