
ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು, ಈ ಭಾಗಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಹಾಸನ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಚಿತ್ರದುರ್ಗದಲ್ಲಿ 115 ಮಿ.ಮೀನಿಂದ 204 ಮಿ.ಮೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಮೇ 18 ರಿಂದ 20ರ ವರೆಗೆ ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಬೆಂಗಳೂರಿಗೆ ಆರೆಂಜ್ ಅಲರ್ಟ್ ಜಾರಿ ಮಾಡಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದ್ದು ಅದರಲ್ಲೂ ಮೈಸೂರು, ಮಂಡ್ಯ, ಕೋಲಾರದಲ್ಲೂ ಭಾರೀ ಮಳೆ ಎಚ್ಚರಿಕೆಯನ್ನು ನೀಡಿದೆ.
ಮಂಗಳೂರು: 31-26
ಉಡುಪಿ : 32-26