
ಸೈಕ್ಲೋನ್ ಪರಿಣಾಮದಿಂದಾಗಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ದಕ್ಷಿಣ ಕನ್ನಡ, ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಹಾಸನ ,ಮೈಸೂರು, ತುಮಕೂರು, ಕೊಡಗು ಜಿಲ್ಲೆಗಳಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್




