
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ. ಇಂದಿನಿಂದ ಮುಂದಿನ 3 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಜಿಲ್ಲೆಗಳ ಹಲವೆಡೆ ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.






























































































































