
ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆಯೂ ಕೆಲವೆಡೆ ಮಳೆಯಾಗುತ್ತಿದೆ. ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.