
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ,ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಷಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್






















































