
ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ವಿವಿಧೆಡೆ ಮಳೆಯಾಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.