
ರಾಜ್ಯದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಜುಲೈ 18ರವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಬೆಳಗಾವಿ ಶಿವಮೊಗ್ಗ ಕೊಡಗು ಮೈಸೂರು ಬೆಂಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್






















































