
ಮುಂಗಾರು ಪ್ರವೇಶವಾಗುತ್ತಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಹವಾಮಾನ ಇಲಾಖೆ ಅಲರ್ಟ್ ನೀಡಿದೆ.
ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಇಂದಿನಿಂದ ರಾಜಧಾನಿಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಈ ಬಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶ ಮಾಡುತ್ತಿದೆ. ಕಳೆದ ವರ್ಷ ಜೂನ್ 15ರಿಂದ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ.