
ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ.
ರಾಯಚೂರು ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲೂ ಸಣ್ಣಗೆ ಮಳೆಯ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್









