
ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದ್ದು , ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ರಾಜ್ಯದ ಕರಾವಳಿಯಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇಂದು ಕೂಡ ಕರಾವಳಿಯಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಮಳೆ ಮುಂದುವರಿವ ಸಾಧ್ಯತೆಗಳಿವೆ.