
ಇಂದಿನಿಂದ 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಯಲ್ಲಿ ಮಳೆ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಂಭವವಿದೆ.