
ರಾಜ್ಯದಲ್ಲಿ ಇಂದು ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಕರಾವಳಿ ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿರಲಿದೆ.




























