
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಒಣಹವೆ ವಾತಾವರಣವಿರಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ,ಚಳಿಯ ಪ್ರಮಾಣ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲೂ ಚಳಿ ಇರಲಿದ್ದು ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ,ಮಂಡ್ಯ ಮತ್ತು ಮೈಸೂರು ,ಚಿತ್ರದುರ್ಗ, ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.



















