
ರಾಜ್ಯದಲ್ಲಿ ಹಲವು ದಿನಗಳಿಂದ ಮಳೆಯಾಗುತ್ತಿದ್ದು , ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ತುಮಕೂರು, ಚಿತ್ರದುರ್ಗ, ಮಂಡ್ಯ ,ರಾಮನಗರ, ಮೈಸೂರು ,ಕೋಲಾರ, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ.
ಬೆಳಗಾವಿ, ಧಾರವಾಡ ಉತ್ತರ ಕನ್ನಡ ಶಿವಮೊಗ್ಗ ಉಡುಪಿ ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.






















































