
ರಾಜ್ಯದಲ್ಲಿ ಹಲವು ದಿನಗಳಿಂದ ಚಳಿ ಏರಿಕೆ ಕಂಡಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ತೀವ್ರ ಚಳಿಯ ಜೊತೆಗೆ ಒಣಹವೆ ಮುಂದುವರೆಯಲಿದೆ. ಬೆಂಗಳೂರು ನಗರದಲ್ಲಿ ಮಂಜು ಕವಿದ ವಾತಾವರಣವಿದ್ದು ಜನರು ಬೆಚ್ಚಗಿನ ಉಡುಪು ಧರಿಸುವಂತೆ ಸೂಚಿಸಲಾಗಿದೆ.
ಬೆಳಗಾವಿ, ವಿಜಯಪುರ ,ಬಳ್ಳಾರಿ ,ರಾಯಚೂರು, ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ.



















