
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿ, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ 42 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗಲಿದೆ.
ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ತುಮಕೂರು ,ಚಿಕ್ಕಬಳ್ಳಾಪುರ, ಕೋಲಾರ ,ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಮಂಡ್ಯ ಮೈಸೂರು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ.



















