
ಬೆಂಗಳೂರು ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡ ಮಳೆ ಯಾಗಲಿದೆ.
ಉತ್ತರ ಕರ್ನಾಟಕದ ಬೀದರ್, ಕಲಬುರಗಿ ,ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಒಣಹವೆ ಮುಂದುವರೆಯಲಿದೆ.



















