
ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ಮುಂದಿನ 5 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜಧಾನಿ ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಮೈಸೂರು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಒಂದು ವಾರಗಳ ಕಾಲ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.