
ರಾಜ್ಯದಲ್ಲಿ ಹಲವು ದಿನಗಳಿಂದ ಚಳಿಯ ವಾತಾವರಣವಿದ್ದು, ಬಿಸಿಲಿನ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರಗಿ ,ಹಾಸನ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಮಾರ್ಚ್ 2ನೇ ವಾರದ ಬಳಿಕ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಜನರು ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ,ಉಡುಪಿ ,ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.