
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ 7 ಜಿಲ್ಲೆಗಳಿಗೆ, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಧಾರವಾಡ, ಗದಗ ,ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಬಾರಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




























