
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಪ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ರಾಜ್ಯದ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿ ಮಾಡಲಾಗಿದೆ.
ಭಾರಿ ಮಳೆಯ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
































