
ರಾಜ್ಯದಲ್ಲಿ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಭಾಗಗಳಲ್ಲೂ ಭಾರಿ ಮಳೆಯಾಗಲಿದೆ.
ಕೊಡಗು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

































