
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೊಡಗು, ಮಂಡ್ಯ ,ಮೈಸೂರು, ಚಾಮರಾಜನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ. ಜೂನ್. 22ರಿಂದ ಮುಂಗಾರು ಚುರುಕುಗೊಳ್ಳಲಿದ್ದು, ಕರಾವಳಿ ಭಾಗಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ನಗರದ ಸುತ್ತ ಮೋಡ ಕವಿದ ವಾತಾವರಣವಿದ್ದು ,ಸಾಧಾರಣ ಮಳೆಯಾಗಲಿದೆ.

































