
ಮುಂದಿನ ಕೆಲವು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 29 ರವರೆಗೆ ಕರಾವಳಿ ಭಾಗದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಗದಗ ಬೀದರ್, ಬೆಳಗಾವಿ ಧಾರವಾಡ ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ , ಬಳ್ಳಾರಿ ಚಾಮರಾಜನಗರ, ಚಿಕ್ಕಬಳ್ಳಾಪುರ ,ಚಿತ್ರದುರ್ಗ ,ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಯಾಗಲಿದೆ.


































