
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ರೈತರಿಗೆ ಖುಷಿ ತಂದಿದೆ. ಕೃಷಿ ಚಟುವಟಿಕೆಗಳು ಗರಿಗೆದರಿದೆ. ಈ ನಡುವೆ ಮಳೆ ಇನ್ನಷ್ಟು ಜೋರಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿಯಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಜೂನ್ 26 ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 22 ರಿಂದ 26 ರವರೆಗೆ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಹಾಗೂ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.