
ಕರಾವಳಿ ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು ಹಾಗೂ ಬೆಳಗಾವಿ ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ,ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದು ಕಡಲ ತೀರದ ನಿವಾಸಿಗಳು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ,ಬಳ್ಳಾರಿ ,ಚಾಮರಾಜನಗರ, ಚಿಕ್ಕಬಳ್ಳಾಪುರ ,ಚಿತ್ರದುರ್ಗ, ದಾವಣಗೆರೆ ,ಕೋಲಾರ ,ಮಂಡ್ಯ ,ಮೈಸೂರು ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.








































