
ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಿಗೆ ಜು.6ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ,ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಸಾರ್ವಜನಿಕರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.








































