
ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ ಸೇರಿದಂತೆ ಮಳೆನಾಡಿನ ಭಾಗಗಳಲ್ಲೂ ಮಳೆಯಾಗಲಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ,ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಳಗಾವಿ, ಧಾರವಾಡ, ಗದಗ ,ಹಾವೇರಿ ಜಿಲ್ಲೆಗಳಲ್ಲಿ ಯೆಲ್ಲೋ ಘೋಷಣೆ ಮಾಡಲಾಗಿದೆ.








































