
ರಾಜ್ಯದಲ್ಲಿ ಕಳೆದ ಎರಡ್ಮೂರು ದಿನದಿಂದ ಮತ್ತೆ ಮುಂಗಾರು ಮಳೆ ಚುರುಕಾಗಿದೆ. ಕಳೆದೊಂದು ವಾರದಿಂದ ಅಲ್ಪ ಪ್ರಮಾಣದಲ್ಲಿ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದ್ದು, ಮುಂದಿನ ಒಂದು ವಾರ ಕರುನಾಡಲ್ಲಿ ಮಳೆ ಜೋರಾಗುವ ಸಾಧ್ಯತೆಯಿದೆ.
ರಾಜ್ಯದ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಮುಂದುವರಿದಿದೆ. ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಮುನ್ಸೂಚನೆ ಇದ್ದು, ಇಂದಿನಿಂದ ಆರೆಂಜ್ ಅಲರ್ಟ್ ಕೂಡ ಘೋಷಿಸಲಾಗಿದೆ. ಇನ್ನೂ ಉತ್ತರ ಒಳನಾಡು ಪ್ರದೇಶ, ಹಾಗೂ ದಕ್ಷಿಣ ಒಳನಾಡಿಗೂ ಭಾರೀ ಮಳೆಯ ಮುನ್ಸೂಚನೆ ನೀಡಿದೆ.