
ರಾಜ್ಯದ ಹಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ.
ಉತ್ತರ ಒಳನಾಡಿನ ಬಾಗಲಕೋಟೆ ಬೆಳಗಾವಿ, ಬೀದರ್ ಧಾರವಾಡ ಗದಗ ಹಾವೇರಿ ಕಲಬುರಗಿ ಕೊಪ್ಪಳ ರಾಯಚೂರು ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು ಮಳೆಯಾಗಲಿದೆ.

















































