
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ ಬಿಸಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲೂ ಗಾಳಿ ಸಹಿತ ಮಳೆಯ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 22ರಂದು ಸಾಧಾರಣ ಮಳೆ ಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಚಾಮರಾಜನಗರ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ,ಚಿತ್ರದುರ್ಗ, ದಾವಣಗೆರೆ ,ಹಾಸನ ,ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

















































