
ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು ಗೊಂಡಿದ್ದು, ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.
ಬೆಳಗಾವಿ ಜಿಲ್ಲೆಯಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


















































