
ರಾಜ್ಯದಲ್ಲಿ ಮುಂಗಾರು ಅಬ್ಬರ ಮುಂದುವರಿದಿದೆ. ಮುಂದಿನ ಐದು ದಿನಗಳ ಕಾಲ ಮತ್ತೆ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ಕೊಟ್ಟಿದೆ.
ಜೂನ್ 29ರ ವರೆಗೆ ಮಳೆ ಮುಂದುವರಿಕೆಯಾಗುವ ಸಾಧ್ಯತೆಗಳಿವೆ. ಜೂನ್ 27ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಿಗೆ ಆರೆಂಜ್ ಅಲರ್ಟ್, ಉತ್ತರ ಒಳನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.