
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 30, 31 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ ಬೀದರ್ ,ಕಲಬುರಗಿ, ಧಾರವಾಡ ,ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.






















































