
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಹಾಗೂ ಮಲೆನಾಡಿನ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡ ,ಶಿವಮೊಗ್ಗ, ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ ,ಬೆಳಗಾವಿ ,ಧಾರವಾಡ, ಹಾವೇರಿ, ಕೊಡಗು ಹಾಸನ ,ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಮೈಸೂರು, ಮಂಡ್ಯ, ರಾಮನಗರ, ತುಮಕೂರು ,ಚಿತ್ರದುರ್ಗ ,ದಾವಣಗೆರೆ ,ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ಸಮುದ್ರದಲ್ಲಿ ಅಲೆಗಳ ತೀವ್ರತೆ ಹೆಚ್ಚಿರಲಿದ್ದು ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.























































