
ರಾಜ್ಯದಲ್ಲಿ ನೈರುತ್ಯ ಮಾರುತ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ ,ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆಗಸ್ಟ್ 4 ಮತ್ತು 5 ರಂದು ಗಾಳಿ ಸಹಿತ ಬಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ ,ರಾಯಚೂರು, ವಿಜಯಪುರ ,ಯಾದಗಿರಿ ಜಿಲ್ಲೆಗಳಲ್ಲಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.























































