
ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಕರಾವಳಿ ಭಾಗದಲ್ಲಿ ಇಂದು ಕೂಡ ಭಾರೀ ಮಳೆಯ ಸಾಧ್ಯತೆ ಇದೆ.
ಮುಂದಿನ ಕೆಲ ದಿನಗಳ ಕಾಲ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಜೂನ್ 29ರ ವರೆಗೆ ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಎಲ್ಲಾ ಬೀಚ್ ಗಳಲ್ಲಿ ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾಪು-ಮಲ್ಪೆ, ಮರವಂತೆಯಲ್ಲಿ ಕಡಲು ಬುಡ ಮೇಲಾಗಿದೆ. ಏಳೆಂಟು ಕಿಲೋಮೀಟರ್ ದೂರದಲ್ಲಿ ಭಾರಿ ಗಾತ್ರದ ಅಲೆಗಳು ಏಳುತ್ತಿದೆ. ಸೈಂಟ್ ಮೇರಿಸ್ ದ್ವೀಪಕ್ಕೆ ಅಲೆಗಳು ಅಪ್ಪಳಿಸಿ ಜಲಾವೃತವಾಗಿದೆ. ಹಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.